ಬ್ರೆಸಿಲಿಯಾ: ಬ್ರೆಜಿಲ್‌ನ ಮಿನಾಸ್ ಗೆರೈಸ್ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಭೂಕುಸಿತದಿಂದ ಕಳೆದ ಒಂದು ವಾರದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ರೆಜಿಲ್‌ನ ಆಗ್ನೇಯ ರಾಜ್ಯದಲ್ಲಿ ಪ್ರವಾಹ ಉಂಟಾಗಿದೆ. ಅಣೆಕಟ್ಟುಗಳು ಸಹ ತುಂಬಿದ್ದು ಹೆಚ್ಚಿನ ನಿಗಾ ಇರಿಸಲಾಗಿದೆ. ಭೂಕುಸಿತದಿಂದ ಆಗ್ನೇಯ ರಾಜ್ಯದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿದ್ದಾರೆ. ಮತ್ತು ಸಾವೊ ಗೊನಾಲೊ ಡೊ ರಿಯೊ ಅಬೈಕ್ಸೊದಲ್ಲಿ 10 ವರ್ಷದ ಬಾಲಕಿ ಕೋಣೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದು ಸಾವನ್ನಪ್ಪಿದ್ದಾಳೆ ಎಂದು ನಾಗರಿಕ ರಕ್ಷಣಾ ಪ್ರಾಧಿಕಾರ ತಿಳಿಸಿದೆ.
ಕಾರ್ಟಿಂಗಾ ನಗರದಲ್ಲಿ ಭೂಕುಸಿತದಿಂದ ಮೂರು ಸಾವುಗಳು ಸಂಭವಿಸಿವೆ. ಎರ್ವಾಲಿಯಾ ನಗರದಲ್ಲಿ ಬಾರ್ ಕುಸಿದು 20 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ರಾಜ್ಯದಲ್ಲಿ ಭಾನುವಾರ ಮತ್ತೆರಡು ಸಾವುಗಳು ವರದಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರವಾಹದಿಂದಾಗಿ 145 ಪುರಸಭೆಗಳು ತುರ್ತು ಪರಿಸ್ಥಿತಿ ಘೋಷಿಸಿವೆ. ಈಗಾಗಲೇ 17,000 ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಗುರುವಾರದ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಬ್ರೆಜಿಲ್‌ನ ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.
ಓದಿ:ಪಂಜಾಬ್‌ನಲ್ಲಿ ಪ್ರಧಾನಿ ಮೋದಿ ಭದ್ರತಾ ಲೋಪ; ಸುಪ್ರೀಂಕೋರ್ಟ್‌ನಲ್ಲಿ ಇಂದು ತೀರ್ಪು ಪ್ರಕಟ