ಕರ್ನಾಟಕ

karnataka

ETV Bharat / international

ಅಲಾಸ್ಕಾದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 6 ತೀವ್ರತೆ ದಾಖಲು

Earthquake strikes off Alaska coast: ನಿನ್ನೆ ಸಂಜೆ ಅಲಾಸ್ಕಾದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 6 ತೀವ್ರತೆ ದಾಖಲಾಗಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.

earthquake
earthquake

By

Published : Dec 22, 2021, 9:52 AM IST

ವಾಷಿಂಗ್ಟನ್ (ಯುಎಸ್): ಅಲಾಸ್ಕಾದ ಕರಾವಳಿ ಪ್ರದೇಶದಲ್ಲಿ ನಿನ್ನೆ ಸಂಜೆ ಭೂಕಂಪ ಸಂಭವಿಸಿದೆ. 6 ತೀವ್ರತೆಯ ಭೂಕಂಪನ ಉಂಟಾಗಿರುವ ಬಗ್ಗೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ ಎಂದು ಯುಎಸ್ ಭೂಕಂಪ ಅಧ್ಯಯನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಪೋರ್ಟ್ ಅಲ್ಸ್‌ವರ್ತ್ ನಗರದ ಪೂರ್ವಕ್ಕೆ 61 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. ಸುಮಾರು 152.6 ಕಿ.ಮೀ. ದೂರದವರೆಗೆ ಭೂಮಿ ಕಂಪಿಸಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.

ಕಂಪನದಿಂದಾಗಿ ಈವರೆಗೆ ಯಾವುದೇ ಸಾವು-ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ.

ABOUT THE AUTHOR

...view details