ವಾಷಿಂಗ್ಟನ್: ಅಫ್ಘಾನಿಸ್ತಾವನ್ನು ತಾಲಿಬಾನ್ ಉಗ್ರರು ಸಂಪೂರ್ಣವಾಗಿ ವಶಪಡಿಸಿಕೊಂಡ ಬಳಿಕ ಅಮೆರಿಕ, ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳು ತಮ್ಮ ದೇಶ ಪ್ರಜೆಗಳನ್ನು ಅಲ್ಲಿಂದ ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದವು. ಈ ಹಿನ್ನೆಲೆಯಲ್ಲಿ ಆಗಸ್ಟ್ 14ರಿಂದ ಈವರೆಗೆ 1 ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ವೈಟ್‌ಹೌಸ್ ಮಾಹಿತಿ ನೀಡಿದೆ.
ತಾಲಿಬಾನ್ ರಾಷ್ಟ್ರವಾಗಿ ಬದಲಾಗಿರುವ ಅಫ್ಘಾನಿಸ್ತಾನದಿಂದ 1,00,100 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಶ್ವೇತಭವನ ತನ್ನ ಹೇಳಿಕೆಯನ್ನು ತಿಳಿಸಿದೆ. ಈ ನಡುವೆ ನಿನ್ನೆ ಸಂಜೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು 13 ಮಂದಿ ಅಮೆರಿಕ ಸೈನಿಕರು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ.