ವಾಷಿಂಗ್ಟನ್:ಇತ್ತೀಚೆಗೆ ಭಾರತದಿಂದ ಉಡಾವಣೆಯಾದ ಕ್ಷಿಪಣಿಯು ಪಾಕಿಸ್ತಾನಕ್ಕೆ ಬಂದಿಳಿದಿರುವುದು ಆಕಸ್ಮಿಕವೇ ಹೊರತು ಬೇರೇನೂ ಇಲ್ಲ ಎಂದು ಅಮೆರಿಕ ಹೇಳಿದೆ.
ಕೆಲ ದಿನಗಳ ಹಿಂದೆ ಪಾಕಿಸ್ತಾನದಲ್ಲಿ ಬಂದಿಳಿದ ಕ್ಷಿಪಣಿಯನ್ನು ಆಕಸ್ಮಿಕವಾಗಿ ಹಾರಿಸಿರುವುದಾಗಿ ಭಾರತ ಶುಕ್ರವಾರ ಹೇಳಿದೆ. ಅಷ್ಟೇ ಅಲ್ಲದೇ ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಈ ಘಟನೆಯು ತನ್ನ ನಿತ್ಯದ ನಿರ್ವಹಣೆಯ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಉಂಟಾಗಿದೆ. ಈ ಘಟನೆ ಬಗ್ಗೆ ತನಿಖೆಗೆ ಭಾರತ ಆದೇಶಿದೆ ಎಂದು ಹೇಳಿದೆ.
ಓದಿ:ಸರ್ಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯ: ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?