ವಾಷಿಂಗ್ಟನ್(ಅಮೆರಿಕ): ವಿಶ್ವದ ದೊಡ್ಡಣ್ಣ ಅಮೆರಿಕದ ಅವಳಿ ಗೋಪುರಗಳ ಮೇಲೆ ದಾಳಿ ನಡೆದು 20 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 2,977 ಮಂದಿಯನ್ನು ಸ್ಮರಿಸಿದರು.
ಸೆಪ್ಟೆಂಬರ್ 11, 2001ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 2,977 ಮೃತಪಟ್ಟವರನ್ನು ಅಮೆರಿಕ ಸ್ಮರಿಸುತ್ತದೆ ಎಂದು ಜೋ ಬೈಡನ್ ವಿಡಿಯೋ ಸಂದೇಶವೊಂದರಲ್ಲಿ ಹೇಳಿದ್ದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ದುರಂತದಿಂದಾಗಿ ಐಕ್ಯತೆಯು ನಮ್ಮ ದೊಡ್ಡ ಶಕ್ತಿಯಾಗಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ ಅವರು, ದಾಳಿಯ ನಂತರ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡಿದ ಭದ್ರತಾ ಪಡೆಗಳನ್ನು ಶ್ಲಾಘಿಸಿದರು.