ನ್ಯೂಯಾರ್ಕ್: ಅಫ್ಘಾನಿಸ್ತಾನದಿಂದ ಸೈನ್ಯವನ್ನು ಹಿಂತೆಗೆದುಕೊಳ್ಳುವ ಯುಸ್ ಅಧ್ಯಕ್ಷ ಜೋ ಬೈಡನ್ ಅವರ ನಿರ್ಧಾರ ತಾರ್ಕಿಕವಾದದ್ದು ಎಂದು ಅಮೆರಿಕದ ಪಾಕಿಸ್ತಾನಿ ರಾಯಭಾರಿ ವಿಶ್ವಸಂಸ್ಥೆಯಲ್ಲಿ ಹೇಳಿಕೆ ನೀಡಿದ್ದಾರೆ.
ನ್ಯೂಯಾರ್ಕ್‌ನಲ್ಲಿನ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್, ಅಫ್ಘಾನಿಸ್ತಾನದ ದೀರ್ಘಾವಧಿಯ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗಾಗಿ ಜಾಗತಿಕ ಸಮುದಾಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಅಫ್ಘಾನಿಸ್ತಾನದಲ್ಲಿನ ಸಂಘರ್ಷಕ್ಕೆ ಎಂದಿಗೂ ಸೇನೆಯೇ ಪರಿಹಾರವಲ್ಲ ಎಂಬ ಪಾಕಿಸ್ತಾನದ ನಿಲುವು ಈಗ ಸಾಬೀತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.