ವಾಷಿಂಗ್ಟನ್, ಅಮೆರಿಕ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅವರ ಜಪಾನಿನ ಪ್ರಧಾನಿ ಯೋಶಿಹಿಡೆ ಸುಗಾ ಅವರೊಂದಿಗೆ ವಾಷಿಂಗ್ಟನ್‌ನಲ್ಲಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ವ್ಯಾಪಾರ ಮತ್ತು ಸಾಂಸ್ಕೃತಿಕ ಸಂಬಂಧಗಳಿಗೆ ಮತ್ತಷ್ಟು ಉತ್ತೇಜನ ನೀಡುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಸುಗಾ ಅವರೊಂದಿಗೆ ವಾಷಿಂಗ್ಟನ್ ಡಿಸಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ಚರ್ಚೆ ಫಲಪ್ರದವಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ (PMO) ಟ್ವೀಟ್ ಮಾಡಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಶಿಂಜೋ ಅಬೆ ಅವರಿಂದ ಯೋಶಿಹಿಡೆ ಸುಗಾ ಅವರು ಅಧಿಕಾರ ಸ್ವೀಕರಿಸಿದ್ದು, ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರೊಂದಿಗೆ ವೈಯಕ್ತಿಕ ಚರ್ಚೆ ನಡೆಸಿದ್ದಾರೆ. ಇಂದು ಎರಡೂ ರಾಷ್ಟ್ರಗಳ ಮುಖ್ಯಸ್ಥರು ಕ್ವಾಡ್ ಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಜೊತೆಗೂಡಿ ಪಾಲ್ಗೊಳ್ಳಲಿದ್ದಾರೆ.
ಇನ್ನು ಇದೇ ವರ್ಷ ಏಪ್ರಿಲ್ನಲ್ಲಿ ಪ್ರಧಾನಿ ಮೋದಿ ಸುಗಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ವೇಳೆ ಉನ್ನತ ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಮತ್ತು ಕೋವಿಡ್ ಸಾಂಕ್ರಾಮಿಕ ರೋಗವನ್ನು ಒಟ್ಟಾಗಿ ಎದುರಿಸುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು.
ಇದನ್ನೂ ಓದಿ:ಕಮಲಾ ಹ್ಯಾರಿಸ್ ಸ್ಫೂರ್ತಿಯ ಮೂಲ ಎಂದ ಪ್ರಧಾನಿ ಮೋದಿ: ಇಂದು ಬೈಡನ್ ಭೇಟಿ