ವಾಷಿಂಗ್ಟನ್, ಅಮೆರಿಕ: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗಿನ ಕ್ವಾಡ್ ಸಭೆಯಲ್ಲಿ ಪಾಲ್ಗೊಂಡಿದ್ದು, ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗೆ ಕ್ವಾಡ್ ಸಭೆಗೆ ಗೈರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಶ್ವೇತ ಭವನದ ಉಪಾಧ್ಯಕ್ಷರ ಕಚೇರಿಯಲ್ಲಿ ಈ ಸಭೆ ನಡೆಯಲಿದ್ದು, ಈ ಸಭೆಗೆ ಪ್ರಧಾನಿ ಮೋದಿ ಗೈರಾಗಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಭಾರತ ಹೊರತುಪಡಿಸಿ ಉಳಿದ ದೇಶಗಳ ನಾಯಕರಾದ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಅವರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಇದಕ್ಕೂ ಮೊದಲು ಜೋ ಬೈಡನ್ ಕ್ವಾಡ್ ಸಭೆಯನ್ನು ಆಯೋಜನೆ ಮಾಡಿದ್ದರು. ಈ ಸಭೆಯಲ್ಲಿ ಅಮೆರಿಕ ಸೇರಿ ಎಲ್ಲಾ ನಾಲ್ಕೂ ರಾಷ್ಟ್ರಗಳ ಮುಖ್ಯಸ್ಥರು ಭಾಗವಹಿಸಿದ್ದರು. ವಿಶ್ವ ಶಾಂತಿಗಾಗಿ ಕ್ವಾಡ್ ಒಕ್ಕೂಟ ಕೆಲಸ ಮಾಡುತ್ತದೆ ಎಂದು ಮೋದಿ ಈ ಸಭೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಕ್ವಾಡ್ ಸಭೆಗೂ ಮೊದಲು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗೆ ಪ್ರಧಾನಿ ಮೋದಿ ವೈಯಕ್ತಿಕವಾಗಿ ಸಭೆಯ ನಡೆಸಿ, ಕೆಲವೊಂದು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ಈ ವೇಳೆ ಜಂಟಿ ಸುದ್ದಿಗೋಷ್ಟಿಯೊಂದನ್ನು ನಡೆಸಿದ್ದು, ಕಮಲಾ ಹ್ಯಾರಿಸ್ ಅವರನ್ನು ಸ್ಫೂರ್ತಿದಾಯಕ ಮಹಿಳೆ ಎಂದು ಮೋದಿ ಬಣ್ಣಿಸಿದ್ದರು.
ಇದನ್ನೂ ಓದಿ:ಜಗತ್ತಿನ ಒಳಿತಿಗಾಗಿ ಕ್ವಾಡ್ ಒಕ್ಕೂಟ ಶ್ರಮಿಸುತ್ತದೆ: ಪ್ರಧಾನಿ ಮೋದಿ