ನ್ಯೂಯಾರ್ಕ್:ಉಕ್ರೇನ್-ರಷ್ಯಾ ಯುದ್ಧದ ಬಿಕ್ಕಟ್ಟಿನ ಮಧ್ಯೆ ಕ್ವಾಡ್ ನಾಯಕರ ವರ್ಚುವಲ್ ಶೃಂಗಸಭೆ ಗುರುವಾರ ಜರುಗಿತು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಭಾಗವಹಿಸಿದ್ದರು.
ಕ್ವಾಡ್ ಸಭೆಯ ಕುರಿತು ಯುಎಸ್ ವಕ್ತಾರ ಜೆನ್ ಪ್ಸಾಕಿ ಮಾಹಿತಿ ನೀಡಿದ್ದಾರೆ. ಉಕ್ರೇನ್‌ನಲ್ಲಿನ ಬೆಳವಣಿಗೆಗಳು ಮತ್ತು ಮಾನವರ ಮೇಲಿನ ಅದರ ಪರಿಣಾಮಗಳನ್ನು ಒಳಗೊಂಡಂತೆ ಸಭೆಯಲ್ಲಿ ಚರ್ಚಿಸಲಾಯಿತು. ಜತೆಗೆ ಏಷ್ಯಾ ಪೆಸಿಫಿಕ್ ವಲಯದಲ್ಲಿನ ಪ್ರಮುಖ ಬೆಳವಣಿಗೆಗಳ ಕುರಿತು ನಾಲ್ವರು ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ನಾಲ್ವರು ನಾಯಕರು ಕ್ವಾಡ್‌ನ ಸಮಕಾಲೀನ ಮತ್ತು ಸಕಾರಾತ್ಮಕ ಕಾರ್ಯಸೂಚಿಗೆ ಸಂಬಂಧಿಸಿದಂತೆ ಅಮೆರಿಕ, ಆಸ್ಟ್ರೇಲಿಯಾದಲ್ಲಿ ನಡೆದ ಸಭೆಯಲ್ಲಿ ಉಪಕ್ರಮಗಳನ್ನು ಕೈಗೊಂಡಿದ್ದರು. ಕಳೆದ ವರ್ಷ ಸೆಪ್ಟೆಂಬರ್ 2021ರಲ್ಲಿ ಕ್ವಾಡ್ ನಾಯಕರು ವಾಷಿಂಗ್ಟನ್‌ನಲ್ಲಿ ಮುಖಾಮುಖಿಯಾಗಿದ್ದರು.