ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವೆ ನೇರ ಮಾತುಕತೆಗೆ ಭಾರತ ಕರೆ ನೀಡಿದ್ದು, ಉಭಯ ದೇಶಗಳು ಸೇನಾ ದಾಳಿ ಕೊನೆಗೊಳಿಸಿ, ಬಿಕ್ಕಟ್ಟು ಪರಿಹರಿಸಿಕೊಳ್ಳಲು ಮಾತುಕತೆ ಹಾಗೂ ರಾಜತಾಂತ್ರಿಕತೆಯೇ ಏಕೈಕ ಮಾರ್ಗವಾಗಿದೆ ಎಂದು ಹೇಳಿದೆ.
ನಿನ್ನೆ ವಿಶ್ವಸಂಸ್ಥೆ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ)ಯನ್ನು ಉದ್ದೇಶಿಸಿ ಮಾತನಾಡಿದ ಭಾರತದ ಉಪ ಪ್ರತಿನಿಧಿ ಆರ್.ರವೀಂದ್ರ, ಹಗೆತನ ನಿಲ್ಲಿಸುವ ದೃಷ್ಟಿಯಿಂದ ನಾವು ನೇರ ಸಂಪರ್ಕಗಳು ಮತ್ತು ಮಾತುಕತೆಗೆ ಕರೆ ನೀಡುತ್ತೇವೆ. ಈ ನಿಟ್ಟಿನಲ್ಲಿ ರಷ್ಯಾ ಒಕ್ಕೂಟ ಮತ್ತು ಉಕ್ರೇನ್‌ನೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
ಯುಎನ್ ಚಾರ್ಟರ್, ಅಂತಾರಾಷ್ಟ್ರೀಯ ಕಾನೂನು, ಸಾರ್ವಭೌಮತ್ವ ಹಾಗೂ ದೇಶಗಳ ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಅಗತ್ಯವನ್ನು ನಾವು ಒತ್ತಿ ಹೇಳುವುದನ್ನು ಮುಂದುವರಿಸುತ್ತೇವೆ. ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಪದೇ ಪದೆ ಕದನ ವಿರಾಮಕ್ಕೆ ಕರೆ ನೀಡಿದ್ದಾರೆ ಎಂದರು.