ವಿಶ್ವಸಂಸ್ಥೆ:ಉಕ್ರೇನ್ನಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ. ಇದೇ ವಿಚಾರವಾಗಿ, ಅಮೆರಿಕ ಮತ್ತು ರಷ್ಯಾದ ನಡುವೆ ಭಿನ್ನಾಭಿಪ್ರಾಯಗಳು ಇನ್ನೂ ಮುಗಿದಿಲ್ಲ. ಈ ಬೆನ್ನಲ್ಲೇ ರಷ್ಯಾ ಮತ್ತು ಉಕ್ರೇನ್‌ನ ಅಧಿಕಾರಿಗಳೊಂದಿಗೆ ಮಾತನಾಡಿದ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ರಷ್ಯಾದ ಉನ್ನತ ರಾಜತಾಂತ್ರಿಕ ಅಧಿಕಾರಿ ಸೆರ್ಗೆಯ್ ಲಾವ್ರೊವ್ ಮತ್ತು ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮ್ಟ್ರೋ ಕುಲೆಬಾ ಅವರೊಂದಿಗೆ ಮಾತನಾಡಿರುವ ಆಂಟೋನಿಯೊ ಗುಟೆರೆಸ್, ಸಂಘರ್ಷ ನಿವಾರಣೆಗೆ ಮಾತುಕತೆಯೇ ಅತ್ಯುತ್ತಮ ಮಾರ್ಗ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಆಂಟೋನಿಯೊ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.
ಇದೇ ವೇಳೆ ವಿಶ್ವಸಂಸ್ಥೆಯ ಕಾಳಜಿ ಬಗ್ಗೆ ಗುಟೆರೆಸ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಉದ್ವಿಗ್ನತೆಗಳನ್ನು ಶಮನಗೊಳಿಸಲು ನಡೆಯುತ್ತಿರುವ ರಾಜತಾಂತ್ರಿಕ ಚರ್ಚೆಗಳನ್ನು ಅವರು ಸ್ವಾಗತಿಸಿದ್ದಾರೆ. ಮಾತುಕತೆಗಿಂತ ಅತ್ಯುತ್ತಮ ಮಾರ್ಗವಿಲ್ಲ ಎಂದು ಡುಜಾರಿಕ್ ಹೇಳಿದ್ದಾರೆ.