ವಾಷಿಂಗ್ಟನ್: ಭಾರತೀಯ - ಅಮೆರಿಕನ್ ಕಾಂಗ್ರೆಸ್ ವುಮೆನ್ ಪ್ರಮೀಲಾ ಜಯಪಾಲ್ ಸೇರಿದಂತೆ ಅಮೆರಿಕದ ಏಳು ಪ್ರಭಾವಿ ಶಾಸಕರ ಗುಂಪು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊಗೆ ಪತ್ರ ಬರೆದಿದ್ದು, ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಧ್ವನಿ ಎತ್ತಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ರೈತರ ಪ್ರತಿಭಟನೆ ಬಗ್ಗೆ ವಿದೇಶಿ ನಾಯಕರು ಮತ್ತು ರಾಜಕಾರಣಿಗಳು ಅನಗತ್ಯ ಹೇಳಿಕೆಗಳನ್ನು ನೀಡಬಾರದು ಮತ್ತು ಈ ವಿಷಯವು ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದೆ ಎಂದು ಭಾರತ ಪ್ರತಿಪಾದಿಸುತ್ತಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
"ಭಾರತದಲ್ಲಿನ ರೈತರಿಗೆ ಸಂಬಂಧಿಸಿದ ಕೆಲವು ಕಾಮೆಂಟ್‌ಗಳನ್ನು ನಾವು ನೋಡಿದ್ದೇವೆ. ಇಂತಹ ಕಾಮೆಂಟ್‌ಗಳು ಅನಗತ್ಯ, ವಿಶೇಷವಾಗಿ ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿರುವವು" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಈ ತಿಂಗಳ ಆರಂಭದಲ್ಲಿ ಹೇಳಿದರು.