ಅಮೆರಿಕ: 15 ವರ್ಷದ ಬಾಲಕ ಹೈಸ್ಕೂಲ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದಾನೆ. ಪರಿಣಾಮ, ಶಿಕ್ಷಕ ಸೇರಿದಂತೆ ಆರು ಜನರು ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳು ಅಸುನೀಗಿದ್ದಾರೆ.
ಮಧ್ಯಾಹ್ನ ಆಕ್ಸ್‌ಫರ್ಡ್ ಹೈಸ್ಕೂಲ್‌ನಲ್ಲಿ ತರಗತಿಗಳು ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ 16 ವರ್ಷದ ಬಾಲಕ, 14 ಮತ್ತು 17 ವರ್ಷದ ಬಾಲಕಿಯರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಆರು ಮಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದು, ಗನ್ ವಶಪಡಿಸಿಕೊಂಡಿದ್ದಾರೆ.