ವಾಷಿಂಗ್ಟನ್:ಅಮೆರಿಕದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳನ್ನ ಎದುರಿಸಲು ಕಠಿಣ ಕ್ರಮ ಕೈಗೊಳ್ಳಲು ಟ್ರಂಪ್ ನಿರ್ಧರಿಸಿದ್ದಾರೆ. ಹೆಚ್ಚು ಹಿಂಸಾಚಾರ ನಡೆಯುತ್ತಿರುವ ಚಿಕಾಗೋ - ನ್ಯೂ ಮೆಕ್ಸಿಕೋದ ಅಲ್ಬುಕರ್ಕ್ಗೆ ಹೆಚ್ಚಿನ ಭದ್ರತೆ ಒದಗಿಸಲು ಫೆಡರಲ್ ಏಜೆಂಟರನ್ನು ಕಳುಹಿಸುವುದಾಗಿ ಟ್ರಂಪ್ ಬುಧವಾರ ಘೋಷಣೆ ಮಾಡಿದ್ದಾರೆ.
ಮುಂಬರುವ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಟ್ರಂಪ್ ಅವರ ಈ ನಿರ್ಧಾರ ಭಾರಿ ಕುತೂಹಲ ಕೆರಳುವಂತೆ ಮಾಡಿದೆ. ಹೆಚ್ಚುತ್ತಿರುವ ಹಿಂಸಾಚಾರದ ಹಿನ್ನೆಲೆ ಸ್ಥಳೀಯ ಆಡಳಿತದಲ್ಲಿ ಫೆಡರಲ್ ಎಜೆನ್ಸಿ ಹಸ್ತಕ್ಷೇಪ ಮಾಡಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅನಿವಾರ್ಯ ಎಂದು ಡೊನಾಲ್ಡ್ ಟ್ರಂಪ್ ತಮ್ಮ ಕ್ರಮ ಸಮರ್ಥಿಸಿಕೊಂಡಿದ್ದಾರೆ.