ನ್ಯೂಯಾರ್ಕ್ /ಯುಎಸ್:ಇರಾಕ್ ರಾಜಧಾನಿ ಬಾಗ್ದಾದ್‌ನ ಮಾರುಕಟ್ಟೆಯಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಗುರುವಾರ ನಡೆದ ಮಾರಣಾಂತಿಕ ಅವಳಿ ಆತ್ಮಾಹುತಿ ಬಾಂಬ್ ಸ್ಫೋಟಗಳನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ.
ಇರಾಕ್ನಲ್ಲಿ ನಡೆದ ದಾಳಿಯಲ್ಲಿ ಮೃತರಾದವರಿಗೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಗುಟೆರೆಸ್ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದಾರೆ ಅಂತಾ ವಕ್ತಾರ ಸ್ಟೀಫನ್ ಡುಜಾರಿಕ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಾಂತಿ, ಸ್ಥಿರತೆ ಮತ್ತು ಐಕ್ಯತೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಭಯ ಮತ್ತು ಹಿಂಸಾಚಾರವನ್ನು ಹರಡುವ ಯಾವುದೇ ಪ್ರಯತ್ನಗಳನ್ನು ತಿರಸ್ಕರಿಸುವಂತೆ ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಇರಾಕ್ ಜನರಿಗೆ ಮನವಿ ಮಾಡಿದ್ದಾರೆ. ಈ ದುಷ್ಕೃತ್ಯದ ಹಿಂದಿರುವವರನ್ನು ಶೀಘ್ರದಲ್ಲಿ ಪತ್ತೆ ಹಚ್ಚಬೇಕೆಂದು ಸರ್ಕಾರಕ್ಕೆ ಸೂಚಿಸಿದ್ದಾರೆ. ಇನ್ನು ಶಾಂತಿ ಬಲಪಡಿಸುವ ಪ್ರಯತ್ನದಲ್ಲಿ ಇರಾಕ್‌ನ ಜನರು ಮತ್ತು ಸರ್ಕಾರವನ್ನು ಬೆಂಬಲಿಸುವ ವಿಶ್ವಸಂಸ್ಥೆಯ ಬದ್ಧತೆಯನ್ನು ಗುಟೆರೆಸ್ ಪುನರುಚ್ಚರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬಾಗ್ದಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಬಾಗ್ದಾದ್‌ನ ಬಾಬ್ ಅಲ್-ಶಾರ್ಜಿ ವಾಣಿಜ್ಯ ಪ್ರದೇಶದ ಬಟ್ಟೆ ಮಾರುಕಟ್ಟೆಯಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡು 32 ಜನರು ಸಾವನ್ನಪ್ಪಿದ್ರು. ಮತ್ತು 110 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:22 ನಗರಗಳಿಗೆ 25 ಲಕ್ಷ ಡೋಸ್ ಕೋವ್ಯಾಕ್ಸಿನ್ ರವಾನೆ..!