ನ್ಯೂಯಾರ್ಕ್ (ಅಮೆರಿಕ):ರಾಜಕೀಯ ಸಂವಾದ ಮತ್ತು ರಾಜತಾಂತ್ರಿಕ ಪರಿಹಾರಗಳ ಮೂಲಕ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವಂತೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕರೆ ನೀಡಿದ್ದಾರೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಭೇಟಿಯಾದ ಪಾಕ್ ವಿದೇಶಾಂಗ ಸಚಿವ - ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮೆಹಮೂದ್ ಖುರೇಷಿ
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ರಾಜಕೀಯ ಮತ್ತು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹಾರ ಕಂಡುಕೊಳ್ಳುವ ಸಲುವಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮೆಹಮೂದ್ ಖುರೇಷಿ ಎರಡು ದಿನಗಳ ಯುಎಸ್ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮೆಹಮೂದ್ ಖುರೇಷಿ ಅವರೊಂದಿಗಿನ ಚರ್ಚೆಯ ಬಳಿಕ ಮಾತನಾಡಿದ ಅವರು, ರಾಜಕೀಯ ಸಂವಾದ, ರಾಜತಾಂತ್ರಿಕ ಪರಿಹಾರಗಳು ಮತ್ತು ಮಾನವ ಹಕ್ಕುಗಳನ್ನು ಗೌರವಿಸುವ ಮೂಲಕ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ರಾಜಕೀಯ ಮತ್ತು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹಾರ ಕಂಡುಕೊಳ್ಳುವ ಸಲುವಾಗಿ ಖುರೇಷಿ ಎರಡು ದಿನಗಳ ಯುಎಸ್ ಪ್ರವಾಸ ಕೈಗೊಂಡಿದ್ದು, ಈ ವೇಳೆ ಯುಎನ್ ಪ್ರಧಾನ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಬಾಗ್ದಾದ್ ಬಳಿ ಇರಾನಿನ ಉನ್ನತ ಸೇನಾಧಿಕಾರಿ ಜನರಲ್ ಕಾಸ್ಸೆಮ್ ಸುಲೇಮಾನಿಯನ್ನು ಅಮೆರಿಕ ಪಡೆಗಳು ಹತ್ಯೆ ಮಾಡಿದ ಬಳಿಕ ಎರಡು ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಹಿನ್ನೆಲೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿರ್ದೇಶನದ ಮೇರೆಗೆ ವಿದೇಶಾಂಗ ಸಚಿವ ಷಾ ಮೆಹಮೂದ್ ಖುರೇಷಿ ಯುಎಸ್ ಭೇಟಿ ಕೈಗೊಂಡಿದ್ದಾರೆ.