ವಾಷಿಂಗ್ಟನ್: ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧದ ಕುರಿತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮ್ಯಾಕ್ರೋನ್ ಅವರೊಂದಿಗೆ ಮಾತನಾಡಿದರು. ಇಬ್ಬರೂ ನಾಯಕರು ಇತ್ತೀಚಿನ ರಾಜತಾಂತ್ರಿಕ ಬಿಕ್ಕಟ್ಟುಗಳನ್ನು ಪರಿಶೀಲಿಸಿದರು ಮತ್ತು ರಷ್ಯಾವನ್ನು ಅದರ ಕ್ರಮಗಳಿಗೆ ಹೊಣೆಗಾರರನ್ನಾಗಿ ಮಾಡಲು ಮತ್ತು ಉಕ್ರೇನ್ ಸರ್ಕಾರ ಮತ್ತು ಜನರನ್ನು ಬೆಂಬಲಿಸುವ ತಮ್ಮ ಬದ್ಧತೆಯನ್ನು ಇದೇ ವೇಳೆ ಒತ್ತಿಹೇಳಿದರು.
ಫೆ.24 ರಂದು, ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಕೋರಿದ ನಂತರ ರಷ್ಯಾ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ವಿಶೇಷ ಕಾರ್ಯಾಚರಣೆ ಉಕ್ರೇನಿಯನ್ ಮಿಲಿಟರಿ ಮೂಲಸೌಕರ್ಯವನ್ನು ಮಾತ್ರ ಗುರಿಯಾಗಿಸಿಕೊಂಡಿದೆ. ನಾಗರಿಕರಿಗೆ ಅಪಾಯವಿಲ್ಲ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.