ವಾಷಿಂಗ್ಟನ್, ಅಮೆರಿಕ:ಭಾರತ-ಚೀನಾ ನಡುವಿನ ಗಡಿ ವಿವಾದವನ್ನು ಅಧ್ಯಕ್ಷ ಜೋ ಬೈಡನ್ ಅವರ ಆಡಳಿತವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅಮೆರಿಕದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಅವರು ಮಾಹಿತಿ ನೀಡಿದ್ದಾರೆ.
ಸೋಮವಾರ ವಿದೇಶಾಂಗ ಸಂಬಂಧಗಳ ಬಗ್ಗೆ ಮಾತನಾಡಿದ ಜೆನ್ ಸಾಕಿ ಚೀನಾ ನೆರೆಹೊರೆಯವರನ್ನು ಬೆದರಿಸಲು ಪ್ರಯತ್ನಿಸುತ್ತಿದೆ. ಚೀನಾದ ಈ ನಡೆಯಿಂದ ನಮಗೆ ಕಳವಳ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾವು ಎರಡೂ ದೇಶಗಳ ನಡುವಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ. ಗಡಿ ವಿವಾದಗಳನ್ನು ಮಾತುಕತೆ ಮೂಲಕ ಶಾಂತಿಯುತವಾಗಿ ಪರಿಹರಿಸಿಕೊಳ್ಳುವುದನ್ನು ಬೆಂಬಲಿಸುತ್ತೇವೆ. ಪ್ರಪಂಚದ ಎಲ್ಲಾ ರಾಷ್ಟ್ರಗಳು ಚೀನಾವನ್ನು ಹೇಗೆ ನೋಡುತ್ತಿವೆ ಎಂಬುದು ನಮಗೆ ಗೊತ್ತು ಎಂದು ಜೆನ್ ಸಾಕಿ ಹೇಳಿದ್ದಾರೆ.