ನ್ಯೂಯಾರ್ಕ್:12 ವರ್ಷ ಮೇಲ್ಪಟ್ಟ ಎಲ್ಲರಿಗೂ ಫೈಜರ್ ಬಯೊ ಎನ್‌ಟೆಕ್ ಲಸಿಕೆ ನೀಡಲು ಅಮೆರಿಕವು ಮುಂದಿನ ವಾರ ಅನುಮತಿ ನೀಡುವ ನಿರೀಕ್ಷೆ ಇದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
12ರಿಂದ15 ವರ್ಷ ವಯಸ್ಸಿನವರಿಗೂ ಕೋವಿಡ್ ಲಸಿಕೆ ನೀಡಲು ಅನುಮತಿ ನೀಡುವಂತೆ ಫೈಜರ್ – ಬಯೊಎನ್‌ಟೆಕ್ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು ಎಂದು ಸರ್ಕಾರಿ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಮಾರ್ಚ್ನಲ್ಲಿ ಕಂಪನಿಗಳ ನೇತೃತ್ವದ ಕ್ಲಿನಿಕಲ್ ಪ್ರಯೋಗದ ಫಲಿತಾಂಶಗಳು ಫೈಜರ್ - ಬಯೋಎನ್ಟೆಕ್ ಕೊರೊನಾ ವೈರಸ್ ಲಸಿಕೆ ಯುವ ವಯಸ್ಕರಿಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ತೋರಿಸಿದೆ.