ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನ (ಯುಎನ್ಜಿಎ) ನಡೆಯುವ ಮುನ್ನ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕ ಮೊದಲ ಮಹಿಳೆ ಮೆಲಾನಿಯಾ ಟ್ರಂಪ್ ಅವರು ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ.
ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಟ್ರಂಪ್ ಪತ್ನಿ ಮೆಲಾನಿಯಾ ಭೇಟಿ ಕೊಟ್ಟಿದ್ದೇಕೆ..?
ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನವು ಇದೇ 27ರಂದು ನಡೆಯಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸಹ ತಮ್ಮ ಭಾಷಣ ಮಾಡಲಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡ ಭಾರತದ ನಿರ್ಧಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.ಟಇ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 74ನೇ ಅಧಿವೇಶನವು ಇದೇ 27ರಂದು ನಡೆಯಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನೊಂದೆಡೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸಹ ತಮ್ಮ ಭಾಷಣ ಮಾಡಲಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂತೆಗಿದುಕೊಂಡ ಭಾರತದ ನಿರ್ಧಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.
74ನೇ ಸಾಮಾನ್ಯ ಸಭೆಯು ಹಿಂದೆಂದಿಗಿಂತಲೂ ಈ ಬಾರಿ ತೀವ್ರ ಕುತೂಹಲ ಉಂಟು ಮಾಡಿದೆ. ಜಾಗತಿಕ ಮಟ್ಟದಲ್ಲಿ ಪಾಕ್, ಕಾಶ್ಮೀರ ವಿಷಯವಾಗಿ ಮುಜುಗರ ಅನುಭವಿಸಿದ್ದು, ಇದರ ನಡುವೆ ತನ್ನ ಮೊಂಡುವಾದ ಮುಂದುವರಿಸಿಕೊಂಡು ಹೋಗುತ್ತಿದೆ.