ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಬರುವ ಜನವರಿ 20ರಂದು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್ ಭಾಗಿಯಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಜೋ ಬೈಡನ್ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗ್ತಿಲ್ಲ ಟ್ರಂಪ್, ಕಾರಣ?
ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಗೆಲುವು ದಾಖಲಿಸಿದ್ದರು. ಚುನಾವಣೆಯ ಫಲಿತಾಂಶದಿಂದ ಅಸಮಾಧಾನ ಹೊಂದಿರುವ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಬೈಡನ್ ಪದಗ್ರಹಣ ಕಾರ್ಯಕ್ರಮದಲ್ಲೂ ಭಾಗಿಯಾಗದಿರಲು ನಿರ್ಧರಿಸಿದ್ದಾರೆ.
Donald Trump
ಓದಿ: ಕೊನೆಗೂ ತಪ್ಪಿನ ಅರಿವಾಗಿ ಸ್ವಯಂ ಕ್ಷಮೆ ಕೇಳಲು ಮುಂದಾದ ಯುಎಸ್ ಅಧ್ಯಕ್ಷ?
ಚುನಾವಣೆ ಫಲಿತಾಂಶ ವಂಚನೆ ಎಂದು ಪದೇ ಪದೆ ಹೇಳಿರುವ ಟ್ರಂಪ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ವಾಷಿಂಗ್ಟನ್ನ ಕ್ಯಾಪಿಟಲ್ (ಸಂಸತ್ ಕಟ್ಟಡ)ದಲ್ಲಿ ಟ್ರಂಪ್ ಬೆಂಬಲಿಗರು ದಾಳಿ ನಡೆಸಿರುವುದು ಇದಕ್ಕೆ ಮತ್ತೊಂದು ಕಾರಣ ಎಂದು ಹೇಳಲಾಗುತ್ತಿದೆ.