ವಾಷಿಂಗ್ಟನ್ ಡಿಸಿ : ಅಮೆರಿಕದ 244 ನೇ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ಹೇಳಿದ್ದಾರೆ.
'ಅಮೆರಿಕ ಭಾರತವನ್ನು ಪ್ರೀತಿಸುತ್ತದೆ' : ಸ್ವಾತಂತ್ರ್ಯ ದಿನಕ್ಕೆ ಶುಭಕೋರಿದ ಮೋದಿಗೆ ಟ್ರಂಪ್ ಧನ್ಯವಾದ - ಅಮೆರಿಕದ ಸ್ವಾತಂತ್ರ್ಯ ದಿನಾಚರಣೆ
ಅಮೆರಿಕದ ಸ್ವಾತಂತ್ರ್ಯ ದಿನಾಚರಣೆಗೆ ಶುಭಕೋರಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಟ್ವೀಟ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದು, ಧನ್ಯವಾದಗಳು ನನ್ನ ಸ್ನೇಹಿತ. ಅಮೆರಿಕ ಭಾರತವನ್ನು ಪ್ರೀತಿಸುತ್ತದೆ ಎಂದು ಹೇಳಿದ್ದಾರೆ.

ಮೋದಿ ಟ್ವೀಟ್ಗೆ ಟ್ರಂಪ್ ಪ್ರತಿಕ್ರಿಯೆ
'ಯುಎಸ್ನ 244ನೇ ಸ್ವಾತಂತ್ರ್ಯ ದಿನಾಚರಣೆಯಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಯುಎಸ್ ಜನರನ್ನು ಅಭಿನಂದಿಸುತ್ತೇನೆ. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶಗಳಾದ (ಅಮೆರಿಕ-ಭಾರತ) ನಾವು ಸ್ವಾತಂತ್ರ್ಯ ಹಾಗೂ ಮಾನವ ಸಂಬಂಧಗಳನ್ನು ಗೌರವಿಸುತ್ತೇವೆ ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್, 'ಧನ್ಯವಾದಗಳು ನನ್ನ ಸ್ನೇಹಿತ. ಅಮೆರಿಕ ಭಾರತವನ್ನು ಯಾವಾಗಲೂ ಪ್ರೀತಿಸುತ್ತದೆ' ಎಂದು ಹೇಳಿದ್ದಾರೆ. ದಕ್ಷಿಣ ಡಕೋಟದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷ ಟ್ರಂಪ್ ಭಾಗವಹಿಸಿದ್ದರು.
Last Updated : Jul 5, 2020, 9:47 AM IST