ವಾಷಿಂಗ್ಟನ್ (ಯು.ಎಸ್): ವಾಯುವ್ಯ ಚೀನಾದ ಕ್ಸಿನ್‌ಜಿಯಾಂಗ್ ಪ್ರಾಂತ್ಯದಲ್ಲಿ ಉಯಿಘರ್ ಮತ್ತು ಇತರ ಅಲ್ಪಸಂಖ್ಯಾತ ಗುಂಪುಗಳ ವಿರುದ್ಧ ಚೀನಾ ಸರ್ಕಾರದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತೋರಿಸಲು ಅಮೆರಿಕ ವಿದೇಶಾಂಗ ಇಲಾಖೆಯು ಹೊಸ ವೆಬ್‌ಪೇಜ್ ಬಿಡುಗಡೆ ಮಾಡಿದೆ.
"ನಾವು ಹೊಸ ವೆಬ್‌ಪೇಜ್ ಅನ್ನು ಬಿಡುಗಡೆ ಮಾಡಿದ್ದು, ಅದು ಉಯಿಘರ್‌ಗಳು ಮತ್ತು ಕ್ಸಿನ್‌ಜಿಯಾಂಗ್‌ನಲ್ಲಿನ ಇತರ ಅಲ್ಪಸಂಖ್ಯಾತ ಗುಂಪುಗಳ ಸದಸ್ಯರ ವಿರುದ್ಧ ಚೀನಾದ ಕಮ್ಯುನಿಸ್ಟ್ ಪಕ್ಷದ ದುರುಪಯೋಗವನ್ನು ವಿವರಿಸುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಜಾಗತಿಕ ಹೋರಾಟವನ್ನು ಮುನ್ನಡೆಸಲು ಯುಎಸ್ ಬದ್ಧವಾಗಿದೆ" ಎಂದು ವಿದೇಶಾಂಗ ಇಲಾಖೆ ಟ್ವೀಟ್‌ನಲ್ಲಿ ತಿಳಿಸಿದೆ.