ವಾಷಿಂಗ್ಟನ್: ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡು ತಾಲಿಬಾನ್ ಅಟ್ಟಹಾಸ ಮೆರೆಯುತ್ತಿದೆ. ಅಲ್ಲಿನ ಜನರು ಪ್ರಾಣಭಯದಿಂದ ಬೇರೆ ಬೇರೆ ದೇಶಗಳತ್ತ ಮುಖ ಮಾಡಿದ್ದಾರೆ. ಈ ನಡುವೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕನ್ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಇದಾದ ಕೆಲವೇ ಗಂಟೆಗಳಲ್ಲಿ ಟ್ವೀಟ್ ಮಾಡಿರುವ ಜೈಶಂಕರ್, ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆಗಳನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.