ವಾಷಿಂಗ್ಟನ್:ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆಯಲ್ಲಿ ಡೆಮೋಕ್ರೆಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡನ್ ಮತ್ತು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ನೇರಾ ನೇರ ಸ್ಪರ್ಧೆ ಏರ್ಪಟ್ಟಿದೆ.
ಚುನಾವಣೆ ಮತ ಎಣಿಕೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ನಾವು ಯುಎಸ್ ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಎಲ್ಲ ಮತದಾನ ಪ್ರಕ್ರಿಯೆ ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ. ನನ್ನ ಮಟ್ಟಿಗೆ, ನಾವು ಈಗಾಗಲೇ ಗೆದ್ದಿದ್ದೇವೆ. ಆದರೆ ಜೋ ಬೈಡನ್ ಚುನಾವಣೆಯನ್ನು ಹೈಜಾಕ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಜೋ ಬೈಡನ್ ವಿರುದ್ಧ ಸುಪ್ರೀಂ ಮೆಟ್ಟಿಲೇರಲಿರುವ ಡೊನಾಲ್ಡ್ ಟ್ರಂಪ್ ನಾವು ಈ ಚುನಾವಣೆಯಲ್ಲಿ ಗೆಲ್ಲಲು ಹೊರಟಿದ್ದೆವು. ನನ್ನ ಪ್ರಕಾರ ನಾವು ಗೆದ್ದಿದ್ದೇವೆ. ದೇಶದ ಒಳಿತಿಗಾಗಿ ಸಮಗ್ರತೆ ಖಚಿತಪಡಿಸುವುದು ನಮ್ಮ ಗುರಿ. ಕಾನೂನು ಸರಿಯಾದ ರೀತಿಯಲ್ಲಿ ಬಳಸಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ, ನಾವು ಯುಎಸ್ ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಬೈಡನ್ ಅಭಿಯಾನವು ಅಮೆರಿಕನ್ ಸಾರ್ವಜನಿಕರನ್ನ ವಂಚನೆ ಮಾಡಿದೆ ಎಂದು ಅವರು ಆರೋಪಿಸಿದರು.
ಈ ಕುರಿತು ಟ್ವೀಟ್ ಸಹ ಮಾಡಿರುವ ಟ್ರಂಪ್, ನಾವು ಗೆದ್ದಿದ್ದೇವೆ. ಆದರೆ ಜೋ ಬೈಡನ್ ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಚುನಾವಣೆ ಮುಕ್ತಾಯಗೊಂಡ ಬಳಿಕ ಮತದಾನ ಮಾಡಲು ಅವಕಾಶವಿರುವುದಿಲ್ಲ ಎಂದು ಇದೇ ವೇಳೆ ಅವರು ತಿರುಗೇಟು ನೀಡಿದ್ದಾರೆ.