ವಾಷಿಂಗ್ಟನ್: ಅಮೆರಿಕದ ಹಿರಿಯ ವಿಜ್ಞಾನಿ ಡಾ. ಅಂಥೋನಿ ಫೌಸಿ ಸೇರಿದಂತೆ ಶ್ವೇತಭವನದ ಕೊರೊನಾ ವೈರಸ್ ಟಾಸ್ಕ್ ಫೋರ್ಸ್‌ನ ಮೂವರು ಸದಸ್ಯರು ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಕೋವಿಡ್-19 ಪಾಸಿಟಿವ್ ಬಂದ ವ್ಯಕ್ತಿಯೊಂದಿಗೆ ಸಂಪರ್ಕ ಇರಿಸಿಕೊಂಡಿದ್ದರಿಂದ ಈ ಮೂವರು ಸೆಲ್ಫ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಲರ್ಜಿ ಮತ್ತು ಸಾಂಕ್ರಾಮಿಕ ರೋಗಗಳ ನಿರ್ದೇಶಕ ಮತ್ತು ಕಾರ್ಯಪಡೆಯ ಪ್ರಮುಖ ಸದಸ್ಯರಾದ ಫೌಸಿ, ಕೊರೊನಾದ ಬಗ್ಗೆ ಸಾರ್ವಜನಿಕರಿಗೆ ಸರಳ ಮತ್ತು ನೇರವಾಗಿ ವಿವರಣೆ ನೀಡುವಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದಾರೆ. ಇನ್ನು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳ ನಿರ್ದೇಶಕ ಡಾ. ರಾಬರ್ಟ್ ರೆಡ್‌ಫೀಲ್ಡ್ ಮತ್ತು ಆಹಾರ ಮತ್ತು ಔಷಧ ಆಡಳಿತದ ಆಯುಕ್ತ ಸ್ಟೀಫನ್ ಹಾನ್ ಕೂಡ ಕೂಡ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.