ವಾಷಿಂಗ್ಟನ್: ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಅನುಮೋದನೆ ನೀಡಿದೆ. ಭಾರತದ ಔಷಧ ನಿಯಂತ್ರಕದಿಂದ ತುರ್ತು ಬಳಕೆಯ ಅಧಿಕಾರ ಪಡೆದಿರುವ ಆರು ಲಸಿಕೆಗಳಲ್ಲಿ ಕೋವ್ಯಾಕ್ಸಿನ್ ಒಂದಾಗಿದೆ. ಕೋವಿಶೀಲ್ಡ್ ಮತ್ತು ಸ್ಪುಟ್ನಿಕ್ ವಿ ಜೊತೆಗೆ ಕೋವ್ಯಾಕ್ಸಿನ್ ಅನ್ನು ರಾಷ್ಟ್ರವ್ಯಾಪಿ ಲಸಿಕಾ ಕಾರ್ಯಕ್ರಮದಲ್ಲಿ ಬಳಸಲಾಗುತ್ತಿದೆ.
ಜುಲೈ 9ರಂದು ಭಾರತ್ ಬಯೋಟೆಕ್ ವಿಶ್ವ ಆರೋಗ್ಯ ಸಂಸ್ಥೆಯ ಇಯುಎಲ್‌ಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರವು ಜುಲೈನಲ್ಲಿ ರಾಜ್ಯಸಭೆಗೆ ತಿಳಿಸಿತ್ತು.