ಚಮನ್ :ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಭಾನುವಾರ ನಿರಾಯುಧ ಪಶ್ತೂನ್ಗಳ ಮೇಲೆ (ಮಧ್ಯ ಮತ್ತು ದಕ್ಷಿಣ ಏಷ್ಯಾಕ್ಕೆ ಸೇರಿದ ಇರಾನಿನ ಜನಾಂಗೀಯ ಗುಂಪು) ಪಾಕಿಸ್ತಾನ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕಾಲ್ನಡಿಗೆಯ ಮೂಲಕ ಪಶ್ತೂನ್ ವ್ಯಾಪಾರಿಗಳು ತಮ್ಮ ಸರಕುಗಳೊಂದಿಗೆ ಗಡಿ ದಾಟಿದ್ದಾರೆ. ಬಳಿಕ ಅಧಿಕಾರಿಗಳು ಅವರನ್ನು ತಡೆದು ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಆದ್ರೆ, ವ್ಯಾಪಾರಿಗಳು ಭದ್ರತಾ ಸಿಬ್ಬಂದಿಗೆ ಗೇಟ್ ತೆರೆಯುವಂತೆ ಒತ್ತಾಯಿಸಿದ್ದಾರೆ. ಅಧಿಕಾರಿಗಳು ನಿರಾಕರಿಸಿದ ನಂತರ, ವ್ಯಾಪಾರಿಗಳು ಗೇಟ್ ಬಳಿ ಇದ್ದ ಸಿಬ್ಬಂದಿಗೆ ಕಲ್ಲು ಮತ್ತು ಸುಟ್ಟ ಟೈರ್ಗಳಿಂದ ಹೊಡೆಯಲು ಪ್ರಾರಂಭಿಸಿದ್ದಾರೆ.
ಪ್ರತಿಭಟನಾ ನಿರತ ವ್ಯಾಪಾರಿ, ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ ತಕ್ಷಣ ಪರಿಸ್ಥಿತಿ ಹಿಂಸಾತ್ಮಕ ರೂಪ ಪಡೆದಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಮನ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಒಬ್ಬರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.