ಕರ್ನಾಟಕ

karnataka

ETV Bharat / international

ಪಾಕಿಸ್ತಾನದಲ್ಲಿ ರೈಲು ಅಪಘಾತ: 10 ಜನ ಸಾವು, 40 ಜನರಿಗೆ ಗಾಯ - ಪ್ಯಾಸೆಂಜರ್ ರೈಲು

ಪಾಕಿಸ್ತಾನದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 10 ಜನ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಘಟನೆಯ ಕುರಿತು ಪಾಕ್ ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸೂಕ್ತ ಸಹಾಯ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.

train

By

Published : Jul 11, 2019, 5:21 PM IST

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ಪರಸ್ಪರ ಡಿಕ್ಕಿ ಹೊಡೆದುದರ ಪರಿಣಾಮವಾಗಿ 10 ಜನ ಮೃತಪಟ್ಟಿದ್ದು, 40 ಜನ ಗಾಯಗೊಂಡಿದ್ದಾರೆ.

ಬೆಳಗಿನ ಜಾವ 4 ಗಂಟೆಗೆ ವಲ್ಹಾರ್​ ಸ್ಟೇಷನ್​ನಲ್ಲಿ ಪ್ಯಾಸೆಂಜರ್ ರೈಲು ಸರ್ವಿಸ್ ಲೈನ್​ಗೆ ಬಂದುದರ ಪರಿಣಾಮ, ಗೂಡ್ಸ್ ಟ್ರೈನ್​ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ರೈಲ್ವೇ ಸಚಿವಾಲಯದ ವಕ್ತಾರ ಅಲಿ ನವಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಧ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ 10 ಜನ ಸಾವನ್ನಪ್ಪಿದ್ದು, 40 ಜನ ಗಾಯಗೊಂಡಿದ್ದಾರೆ. ಈ ಅಂಕಿ ಅಂಶ ಏರಿಕೆಯಾಗುವ ಸಾಧ್ಯತೆಯಿದೆ. ಸಿಗ್ನಲಿಂಗ್ ಸಮಸ್ಯೆ ಹಾಗೂ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಮಲಿಕ್ ಹೇಳಿದ್ದಾರೆ.

ಆಸ್ಪತ್ರೆಗಳು ಈಗಾಗಲೆ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಕೆಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಸರ್ಕಾರಿ ಅಧಿಕಾರಿ ಜಮೀಲ್ ಅಹ್ಮದ್ ಹೇಳಿದ್ದಾರೆ.

ಪ್ರಧಾನಮಂತ್ರಿ ಇಮ್ರಾನ್ ಖಾನ್ ಶೋಕ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಅವಘಡ ನಡೆಯದಂತೆ ಕ್ರಮ ಕೈಗಳ್ಳಬೇಕೆಂದು ಕರೆ ಕೊಟ್ಟಿದ್ದಾರೆ.

"ಸಾದಿಕಾಬಾದ್​ನಲ್ಲಿ ನಡೆದ ಅಪಘಾತ ಬೇಸರ ತರಿಸಿದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ; ಗಾಯಾಳುಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ. ರೈಲ್ವೇ ಮೂಲಸೌಕರ್ಯದ ನಿರ್ಲಕ್ಷ್ಯದ ಕುರಿತು ಮಂಜಾಗ್ರತೆ ವಹಿಸಿ ಸುರಕ್ಷತೆಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ರೈಲ್ವೇ ಸಚಿವಾಲಯಕ್ಕೆ ತಿಳಿಸಿದ್ದೇನೆ" ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಪ್ರಧಾನ ಮಂತ್ರಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ರೈಲ್ವೆ ಮೂಲಸೌಕರ್ಯದ ನಿರ್ಲಕ್ಷ್ಯದ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ರೈಲ್ವೆ ಸಚಿವ ಶೇಕ್ ರಶೀದ್ ಅಹ್ಮದ್​ಗೆ ಪ್ರಧಾನಿ ಆದೇಶ ನೀಡಿದ್ದಾರೆ.

ABOUT THE AUTHOR

...view details