ಬಾಂಕೆ(ನೇಪಾಳ): ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ವಲಸೆ ಕಾರ್ಮಿಕರು ಸಾವನ್ನಪ್ಪಿದ ಘಟನೆ ನೇಪಾಳದಲ್ಲಿ ನಡೆದಿದೆ. ಇಲ್ಲಿನ ಬಾಂಕೆ ಜಿಲ್ಲೆಯ ಈಸ್ಟ್- ವೆಸ್ಟ್ ಹೈವೇಯಲ್ಲಿ ದುರ್ಘಟನೆ ಸಂಭವಿಸಿದ್ದು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಲ್ಲಿಸಿದ್ದ ಟ್ರಕ್ಗೆ ಗುದ್ದಿದ ಬಸ್... 12 ವಲಸೆ ಕಾರ್ಮಿಕರ ದುರ್ಮರಣ
ಭಾರತದಿಂದ ನೇಪಾಳಕ್ಕೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಬಸ್ ಅಪಘಾತವಾಗಿ 12 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ಬಾಂಕೆ ಜಿಲ್ಲೆಯಲ್ಲಿ ನಡೆದಿದೆ.
ರಸ್ತೆ ಅಪಘಾತ
ಬಸ್ನಲ್ಲಿ 30ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಸಲ್ಯಾನ್ ಮಾರ್ಗವಾಗಿ ಭಾರತದಿಂದ ನೇಪಾಳಕ್ಕೆ ಹಿಂದಿರುಗುತ್ತಿದ್ದರು. ಈ ವೇಳೆ ನಿಲ್ಲಿಸಿದ್ದ ಟ್ರಕ್ಗೆ ಬಸ್ ಗುದ್ದಿದೆ. ಈ ದುರಂತದಲ್ಲಿ ಬಸ್ ಚಾಲಕ ಸೇರಿ 12 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ನೇಪಾಳ ಗಂಜ್ನಲ್ಲಿರುವ ಭೇರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಯಗೊಂಡವರಲ್ಲಿ ನಾಲ್ಕು ಮಂದಿಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭೇರಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.