ಇಸ್ಲಾಮಾಬಾದ್:ಪಾಕಿಸ್ತಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಓರ್ವ ಮಹಿಳೆ ಮಗು ಸೇರಿದಂತೆ 12 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದ್ದು, 23 ಮಂದಿ ಗಾಯಗೊಂಡಿದ್ದಾರೆ.
ಭೀಕರ ರಸ್ತೆ ಅಪಘಾತ... ಮಹಿಳೆ, ಮಗು ಸೇರಿ 12 ಮಂದಿ ದುರ್ಮರಣ! - ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪಘಾತ
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ 12 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
ಬಸ್ನಲ್ಲಿ ನೈರುತ್ಯ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ವಿವಾಹದ ಆರತಕ್ಷತೆಯಲ್ಲಿ ಭಾಗಿಯಾಗಿ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಶಾರ್ಜೀಲ್ ನೂರ್ ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ರವಾನೆ ಮಾಡುತ್ತಿದ್ದಾಗ ಅಸುನೀಗಿದ್ದಾರೆ. ಗಾಯಗೊಂಡವರನ್ನ ಸಿಂಧ್ನ ಲಾರ್ಕಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.