ಕರಾಚಿ (ಪಾಕಿಸ್ತಾನ): ಶುಕ್ರವಾರ ರಾತ್ರಿ ಪಾಕಿಸ್ತಾನದ ಕರಾಚಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕಾರ್ಖಾನೆಯೊಳಗೆ ಇನ್ನೂ 25 ಮಂದಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಮೂವರು ಗಾಯಗೊಂಡಿದ್ದಾರೆ. ಮೃತರ ಪೈಕಿ 12 ಜನರನ್ನು ಗುರುತಿಸಲಾಗಿದ್ದು, ಸಂಬಂಧಿಕರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಆದರೆ ಉಳಿದ 4 ಮೃತದೇಹಗಳನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಹೇಳಿಕೆ ನೀಡಿರುವುದಾಗಿ ಡಾನ್ ಸುದ್ದಿವಾಹಿನಿ ತಿಳಿಸಿದೆ.