ಲಿಖತ್ಪುರ್: ಪಾಕಿಸ್ತಾನದ ಕರಾಚಿ- ರಾವಲ್ಪಿಂಡಿ ತೇಜ್ ಗಾಂ ಎಕ್ಸ್ ಪ್ರೆಸ್ ರೈಲು ಹೊತ್ತಿ ಹುರಿದ ಅಗ್ನಿ ಅವಘಡದಲ್ಲಿ 65 ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಲಾಹೋರ್ನಿಂದ ಕರಾಚಿಗೆ ತೆರಳುತ್ತಿದ್ದ ತೇಜ್ ಗಾಂ ಎಕ್ಸ್ಪ್ರೆಸ್ ರೈಲು, ಲಿಯಾಖತ್ಪುರ ಬಳಿಯ ರಹಿಮ್ ಯಾರ್ ಖಾನ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ 65 ಜನರು ಸಜೀವದಹನವಾಗಿದ್ದಾರೆ. ಇನ್ನು 13ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಹೊತ್ತಿ ಉರಿದ ತೇಜ್ಗಾಂ ಎಕ್ಸ್ಪ್ರೆಸ್ ಲಿಯಾಖತ್ಪುರಕ್ಕೆ ತಲುಪುತ್ತಿರುವ ವೇಳೆ ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದು ಉಳಿದ ಬೋಗಿಗಳಿಗೂ ಆವರಿಸತೊಡಿಗಿದ್ದು, ಒಟ್ಟು ಮೂರು ಬೋಗಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಅವುಗಳಲ್ಲಿ ಸುಮಾರು 200 ಜನರು ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಪಾಕಿಸ್ತಾನ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಯಾಣಿಕರು ಸಾಗಿಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಎಂಧು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.