ಕಠ್ಮಂಡು(ನೇಪಾಳ): ದಕ್ಷಿಣ ನೇಪಾಳದ ಬಾರಾ ಜಿಲ್ಲೆಯ ಉಕ್ಕಿನ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ. ಮೃತರನ್ನು ಬಿಹಾರ ಮೂಲದ ಪ್ರದೀಪ್ ಗೋಡ್ (40) ಮತ್ತು ರಾಮನಾಥ್ ಮೆಹತೋ (45) ಎಂದು ಗುರುತಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಗದಮ್ಸಾ ಸ್ಟೀಲ್ಸ್ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಎಣ್ಣೆ ಟ್ಯಾಂಕ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗ್ತಿದೆ. ಈ ಬಗ್ಗೆ ಕಾರ್ಮಿಕ ಸಂಘಟನೆಯ ಕಾರ್ಯದರ್ಶಿ ದೀಪಕ್ ಕಾರ್ಕಿ ಮಾಹಿತಿ ನೀಡಿದ್ದಾರೆ. ಸ್ಫೋಟದ ವೇಳೆ ಕಾರ್ಮಿಕರು ಟ್ಯಾಂಕ್ಅನ್ನು ಸ್ವಚ್ಛಗೊಳಿಸುತ್ತಿದ್ದರು ಎಂದು ತಿಳಿದುಬಂದಿದೆ.