ಇಸ್ಲಾಮಾಬಾದ್(ಪಾಕಿಸ್ತಾನ): ಒಂದೆಡೆ ಅಫ್ಘಾನಿಸ್ತಾನದಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆಗಳು ನಡೆಯುತ್ತಿವೆ. ಪಾಕಿಸ್ತಾನದ ಐಎಸ್ಐ(ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ) ಮುಖ್ಯಸ್ಥರ ನೇತೃತ್ವದ ತಂಡ ತಾಲಿಬಾನಿಗಳನ್ನು ಭೇಟಿಯಾಗಿ ಚರ್ಚಿಸಲು ಮುಂದಾಗಿದೆ. ಈ ಬೆನ್ನಲ್ಲೇ ಪಾಕಿಸ್ತಾನದಲ್ಲಿ ತಾಲಿಬಾನ್ ಆತ್ಮಾಹುತಿ ಬಾಂಬ್ ದಾಳಿ ನಡೆಸಿದೆ.
ಇಲ್ಲಿನ ಕ್ವೆಟ್ಟಾ ನಗರದಲ್ಲಿ ಭಾನುವಾರ ನಡೆದ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ತಂಡಗಳು ತಿಳಿಸಿವೆ. ನಗರದ ಹೊರವಲಯದಲ್ಲಿರುವ ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಬೆಂಗಾವಲಿನ ವಾಹನಗಳ ಮೇಲೆ ದಾಳಿ ನಡೆದಿದೆ.