ಫೈಸಲಾಬಾದ್(ಪಾಕಿಸ್ತಾನ):ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಾಲ್ವರು ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಕೆಲ ದುಷ್ಕರ್ಮಿಗಳು, ತದನಂತರ ಅವರ ಬಟ್ಟೆ ಬಿಚ್ಚಿಸಿ ಚಿತ್ರೀಕರಣ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಬಿತ್ತರಿಸಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿಗಳ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಫೈಸಲಾಬಾದ್‌ನ ಬಾವಾ ಚೌಕ್ ಮಾರ್ಕೆಟ್‌ನಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಉಸ್ಮಾನ್ ಎಲೆಕ್ಟ್ರಿಕ್ ಸ್ಟೋರ್ನ ಮಾಲೀಕ ಸದ್ದಾಂ, ಆತನ ಸಹದ್ಯೋಗಿಗಳಾದ ಫೈಸಲ್, ಜಹೀರ್ ಅನ್ವರ್ ಹಾಗೂ ಫಕೀರ್ ಹುಸೇನ್ ಎಂಬ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.