ಮನಿಲಾ: ದಕ್ಷಿಣ ಫಿಲಿಪೈನ್ಸ್ನ ದಾವಾವೊ ಡೆಲ್ ಸುರ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ.
ಮ್ಯಾಗ್ಸೆಸೆ ಪಟ್ಟಣದ ಆಗ್ನೇಯಕ್ಕೆ 6 ಕಿ.ಮೀ ದೂರದಲ್ಲಿ ಹಾಗೂ 15 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ ಎಂದು ಫಿಲಿಪೈನ್ ಭೂಕಂಪಶಾಸ್ತ್ರ ಹಾಗೂ ಜ್ವಾಲಾಮುಖಿ ಸಂಸ್ಥೆ ವರದಿ ಮಾಡಿದೆ.