ಜಕಾರ್ತ :ಇಂಡೋನೇಷ್ಯಾದ ಪೂರ್ವದ ಮಲುಕು ಪ್ರಾಂತ್ಯದಲ್ಲಿ ಪ್ರಬಲ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲಾಗಿದೆ.
ಮಂಗಳವಾರ ಮಧ್ಯಾಹ್ನ 3:20ರ ಸುಮಾರಿಗೆ ಮೌಮೆರೆಯಿಂದ ಉತ್ತರಕ್ಕೆ 95 ಕಿ.ಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದುವಾಗಿದೆ. ಹೀಗಾಗಿ, ಫ್ಲೋರ್ಸ್ ಸಮುದ್ರದ ಸಮೀಪದ ಕರಾವಳಿಯಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.
75.9 ಕಿ.ಮೀ ಆಳವಿರುವ ಭೂಕಂಪನ ಕೇಂದ್ರವು ಆರಂಭದಲ್ಲಿ 7.758 ಡಿಗ್ರಿ ದಕ್ಷಿಣ ವಿಸ್ತಾರ ಹಾಗೂ 122.313 ಡಿಗ್ರಿ ಪೂರ್ವ ರೇಖಾಂಶದಲ್ಲಿದೆ ಎಂದು ನ್ಯಾಶನಲ್ ಓಷಿಯಾನಿಕ್ ಅಂಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಷನ್ ಹೇಳಿದೆ.