ಬಾಗ್ಲಾನ್ (ಅಫ್ಘಾನಿಸ್ತಾನ): ತಾಲಿಬಾನ್ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಎಂಟು ಮಂದಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ನಡೆದಿದೆ.
ಎರಡು ಸೇನಾ ವಾಹನಗಳು ನಾಶವಾಗಿದ್ದು, ಭದ್ರತಾ ಪಡೆಯ ಮತ್ತಿಬ್ಬರು ಸದಸ್ಯರು ನಾಪತ್ತೆಯಾಗಿದ್ದಾರೆ ಎಂದು ಟೋಲೊ ನ್ಯೂಸ್ ವರದಿ ಮಾಡಿದೆ. ದಾಳಿಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.