ಢಾಕಾ: ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಡಾಕಾದ ಹೊರವಲಯದಲ್ಲಿರುವ ಕಾರ್ಖಾನೆಯೊಂದರಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಅವಘಡದಲ್ಲಿ ಸುಮಾರು 52 ಕಾರ್ಮಿಕರು ಮೃತಪಟ್ಟಿದ್ದಾರೆ. ಕನಿಷ್ಠ 30 ಜನ ಗಾಯಗೊಂಡಿದ್ದಾರೆ.
ಬಾಂಗ್ಲಾದಲ್ಲಿ ಭಾರಿ ಅಗ್ನಿ ದುರಂತ: 40 ಮಂದಿ ಸಜೀವ ದಹನ, ಸಮರೋಪಾದಿಯಲ್ಲಿ ರಕ್ಷಣೆ ಕಾರ್ಯ - 40 ಮಂದಿ ಸಾವು
ಬಾಂಗ್ಲಾದೇಶದಲ್ಲಿ ಫುಡ್ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 40 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಬಾಂಗ್ಲಾದಲ್ಲಿ ಭಾರಿ ಅಗ್ನಿ ದುರಂತ; 40 ಮಂದಿ ಸಜೀವ ದಹನ..!
ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಕೆಲವರು ಬಹುಮಹಡಿ ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಗುರುವಾರ ರಾತ್ರಿ ಈ ದುರಂತ ಸಂಭವಿಸಿದೆ.
Last Updated : Jul 9, 2021, 3:59 PM IST