ಇಸ್ಲಾಮಾಬಾದ್:ಪಾಕಿಸ್ತಾನಲ್ಲಿರುವ ಅಫ್ಘಾನಿಸ್ತಾನದ ರಾಯಭಾರಿಯ ಮಗಳನ್ನು ಇಸ್ಲಾಮಾಬಾದ್ನಿಂದ ಅಪಹರಿಸಿ, ಹಲವು ಗಂಟೆಗಳ ಕಾಲ ಒತ್ತೆಯಾಳುಗಳಾಗಿರಿಸಿಕೊಂಡು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಉಭಯ ದೇಶಗಳ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಫ್ಘಾನಿಸ್ತಾನದ ರಾಯಭಾರಿಯ ಮಗಳು ಸಿಲ್ಸಿಲಾ ಅಲಿಖಿಲ್ (26) ಬಾಡಿಗೆ ವಾಹನದಲ್ಲಿ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಅಪರಿಚಿತರಿಂದ ಕೆಲ ಗಂಟೆಗಳ ಕಾಲ ಅಪಹರಣಕ್ಕೊಳಗಾಗಿದ್ದಾರೆ. ಆ ಬಳಿಕ ಸಿಲ್ಸಿಲಾಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಅಘ್ಘನ್ ಸರ್ಕಾರ ತಿಳಿಸಿದೆ. ಆದರೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿಲ್ಲ.