ದುಶಾಂಬೆ(ತಜಿಕಿಸ್ತಾನ): ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದ 87 ಭಾರತೀಯರನ್ನು ಒಳಗೊಂಡ ಏರ್ ಇಂಡಿಯಾ(Air India) ವಿಮಾನ ತಜಿಕಿಸ್ತಾನದಿಂದ ಭಾರತಕ್ಕೆ ಪ್ರಯಾಣ ಬೆಳಸಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಗ್ಚಿ 'ಅಫ್ಘಾನಿಸ್ತಾನದಿಂದ ಭಾರತೀಯರನ್ನು ಮಾತೃಭೂಮಿಗೆ ಕರೆತರಲಾಗುತ್ತಿದೆ. 87 ಭಾರತೀಯರನ್ನು ಹೊತ್ತ ಎಐ 1956 ಹೆಸರಿನ ವಿಮಾನ ತಜಿಕಿಸ್ತಾನಿಂದ ದೇಶಕ್ಕೆ ಮರಳಿದೆ. ಇದರಲ್ಲಿ ಇಬ್ಬರು ನೇಪಾಳಿ ಪ್ರಜೆಗಳೂ ಇದ್ದಾರೆ. ದುಶಾಂಬೆಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹಕಾರ ಮತ್ತು ಬೆಂಬಲ ನೀಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಯನ್ನು ಕರೆತರಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈಗ ಭಾರತಕ್ಕೆ ಬರುತ್ತಿರುವ ವ್ಯಕ್ತಿಗಳನ್ನು ಮೊದಲು ಕಾಬೂಲ್ನಿಂದ ಭಾರತೀಯ ವಾಯುಪಡೆಯ ವಿಮಾನದ ಮೂಲಕ ತಜಿಕಿಸ್ತಾನಕ್ಕೆ ಸ್ಥಳಾಂತರ ಮಾಡಲಾಗಿತ್ತು ಎಂದು ಅರಿಂದಮ್ ಬಗ್ಚಿ ಮಾಹಿತಿ ನೀಡಿದ್ದಾರೆ.