ಇಸ್ಲಾಮಾಬಾದ್ (ಪಾಕಿಸ್ತಾನ): ಇಂದು ನಸುಕಿನ ಜಾವ ಸುಮಾರು 3.30ರ ವೇಳೆಗೆ ದಕ್ಷಿಣ ಪಾಕಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ರಿಕ್ಟರ್ ಮಾಪಕದಲ್ಲಿ 6.0ರಷ್ಟು ತೀವ್ರತೆ ದಾಖಲಾಗಿದೆ. ಬಲೂಚಿಸ್ತಾನ್ ಪ್ರಾಂತ್ಯದ ಹರ್ನೈ ಪ್ರದೇಶದಿಂದ ಉತ್ತರ-ಈಶಾನ್ಯಕ್ಕೆ 14 ಕಿ.ಮೀ ದೂರದಲ್ಲಿ ಹಾಗೂ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ.