ಕರಾಚಿ (ಪಾಕಿಸ್ತಾನ):ಕರಾಚಿಯ ಗುಲ್ಶನ್-ಇ-ಇಕ್ಬಾಲ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ವರದಿಗಳ ಪ್ರಕಾರ, ಕರಾಚಿ ವಿಶ್ವವಿದ್ಯಾಲಯದ ಮಸ್ಕನ್ ಗೇಟ್ ಎದುರಿನ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಘಟನೆ ಸಂಭವಿಸಿದೆ. ಸ್ಫೋಟದ ಕಾರಣ, ಸ್ವರೂಪವನ್ನು ಪೊಲೀಸರು ನಿರ್ಧರಿಸುತ್ತಿದ್ದಾರೆ ಎಂದು ವರದಿಯಾಗಿದೆ.