ಉತಾಲ್(ಬಲೂಚಿಸ್ತಾನ):ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ವೊಂದು ಉರುಳಿ ಬಿದ್ದಿರುವ ಪರಿಣಾಮ 15 ಮಂದಿ ಸಾವನ್ನಪ್ಪಿ, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಲೂಚಿಸ್ತಾನದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಈ ಭೀಕರ ಘಟನೆ ನಡೆದಿದ್ದು, ಕುವೈತ್ - ಕರಾಚಿ ಹೈವೆಯಲ್ಲಿ ಬಸ್ ಉರುಳಿ ಬಿದ್ದಿದೆ. ಸಾವನ್ನಪ್ಪಿದವರಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಏಳು ಮಂದಿ ಪುರುಷರು ಸೇರಿದ್ದಾರೆ. ಬಲೂಚಿಸ್ತಾನದಿಂದ ಕರಾಚಿಗೆ ಈ ಬಸ್ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.