ಆಫ್ಘಾನಿಸ್ತಾನ:ಜನನಬೀಡ ಮಾರ್ಕೆಟ್ನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಮಕ್ಕಳು ಸೇರಿದಂತೆ 23 ಮಂದಿ ಸಾವನ್ನಪ್ಪಿರುವ ಘಟನೆ ಆಫ್ಘಾನಿಸ್ತಾನದ ಹೆಲ್ಮಂಡ್ನಲ್ಲಿ ನಡೆದಿದೆ.
ಜನರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಅಲ್ಲಿನ ಮಿಲಿಟರಿ ಪಡೆ ತಿಳಿಸಿದ್ದು, ಕಾರ್ನಲ್ಲಿ ಇಡಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ. ತಾಲಿಬಾನ್ ಉಗ್ರ ಸಂಘಟನೆ ಈ ದಾಳಿ ನಡೆಸಿದೆ ಎಂದು ಆರೋಪ ಮಾಡಲಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ತಾಲಿಬಾನ್ ಇದೊಂದು ಮಿಲಿಟರಿ ದಾಳಿ ಎಂದು ಪ್ರತ್ಯುತ್ತರ ನೀಡಿದೆ.
ಜೂನ್ 25ರಂದು ಅಫ್ಘಾನಿಸ್ತಾನದ ಉತ್ತರ ಬಾಲ್ಕ್ ಪ್ರಾಂತ್ಯದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ 25 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಅದಕ್ಕೆ ಪ್ರತ್ಯುತ್ತರವಾಗಿ ಈ ದಾಳಿ ನಡೆದಿರುಬಹುದು ಎಂಬ ಶಂಕೆ ಕೂಡ ವ್ಯಕ್ತವಾಗುತ್ತಿದೆ.