ಮಾಸ್ಕೋ (ರಷ್ಯಾ): ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಈ ತಿಂಗಳು ಕೊರೊನಾ ವೈರಸ್ನ ಸ್ಪುಟ್ನಿಕ್ ವಿ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ನಡೆಯಲಿವೆ ಎಂದು ರಷ್ಯಾದ ನೇರ ಹೂಡಿಕೆ ನಿಧಿಯ (ಆರ್‌ಡಿಐಎಫ್) ಸಿಇಒ ಕಿರಿಲ್ ಡಿಮಿಟ್ರಿವ್ ಖಚಿತಪಡಿಸಿದ್ದಾರೆ.
ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಫಿಲಿಪೈನ್ಸ್, ಭಾರತ ಮತ್ತು ಬ್ರೆಜಿಲ್ನಲ್ಲಿ ಕ್ಲಿನಿಕಲ್ ಪ್ರಯೋಗಗಳು ಈ ತಿಂಗಳಿನಿಂದ ಪ್ರಾರಂಭವಾಗಲಿವೆ ಎಂದು ಡಿಮಿಟ್ರಿವ್ ಹೇಳಿದ್ದಾರೆ.
"ಆಗಸ್ಟ್ 26ರಂದು ರಷ್ಯಾದಲ್ಲಿ 40,000ಕ್ಕೂ ಹೆಚ್ಚು ಜನರು ನೋಂದಾಯಿಸಿದ್ದು, ಅಧ್ಯಯನಗಳು ಪ್ರಾರಂಭವಾಗಿವೆ. ಮೂರನೇ ಹಂತದ ಪ್ರಯೋಗದ ಪ್ರಾಥಮಿಕ ಫಲಿತಾಂಶಗಳನ್ನು ಅಕ್ಟೋಬರ್-ನವೆಂಬರ್ನಲ್ಲಿ ಪ್ರಕಟಿಸಲಾಗುವುದು" ಎಂದು ಡಿಮಿಟ್ರಿವ್ ತಿಳಿಸಿದ್ದಾರೆ.