ಬೀಜಿಂಗ್: ಚೀನಾದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಹೋಟೆಲ್ಗಳಲ್ಲಿಯೂ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಇಂದು ಹೊಸದಾಗಿ 9 ಪ್ರಕರಣಗಳು ವರದಿಯಾಗಿವೆ. ಸ್ಥಳೀಯವಾಗಿ 38 ಕೊರೊನಾ ಕೇಸ್ಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಅಕ್ಟೋಬರ್ 12 ರಿಂದ 15 ರವರೆಗೆ ಮಂಗೋಲಿಯಾ, ನಿಂಗ್ ಕ್ಸಿಯಾ ಹುಯಿ, ಶಾಂಕ್ಸಿ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸಿ, ಬೀಜಿಂಗ್ಗೆ ಹಿಂದಿರುಗಿದ್ದ ಐವರಿಗೆ ಕೋವಿಡ್ ದೃಢ ಪಟ್ಟಿದೆ. ಮುನ್ಸಿಪಲ್ ಆರೋಗ್ಯ ಆಯೋಗದ ಪ್ರಕಾರ ಇನ್ನೊಬ್ಬ ವ್ಯಕ್ತಿ ಕೊರೊನಾ ಸೋಂಕಿತನೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ಮಾಹಿತಿ ನೀಡಿದೆ.
ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆ, ಸೋಂಕಿತರನ್ನು ಪ್ರತ್ಯೇಕಗೊಳಿಸುವುದು, ಹೋಟೆಲ್ ಬುಕ್ಕಿಂಗ್ ರದ್ದುಗೊಳಿಸಲಾಗುತ್ತಿದೆ. ಜನತೆ ಸ್ಯಾನಿಟೈಸರ್, ಮಾಸ್ಕ್ ಬಳಕೆಯಂತಹ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆರೋಗ್ಯಾಧಿಕಾರಿಗಳು ಹೇಳುತ್ತಿದ್ದಾರೆ.