ಜಕಾರ್ತಾ: ಜನವರಿ 16 ರಂದು ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 56 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಕೃತಿಕ ವಿಕೋಪದಲ್ಲಿ ಗಾಯಗೊಂಡ 826 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರಲ್ಲಿ ಬಹುಪಾಲು ಸುಲವೇಸಿ ಪ್ರಾಂತ್ಯದ ಮಮುಜಿ ಪ್ರದೇಶದವರಾಗಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹಾಗಾಗಿ, ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿ (ಬಿಎನ್‌ಪಿಬಿ) ಮಾಹಿತಿ ನೀಡಿದೆ.