ಇಸ್ಲಾಮಾಬಾದ್: 370ನೇ ವಿಧಿ ರದ್ದತಿ ವಿಚಾರದಲ್ಲಿ ಕುಪಿತವಾಗಿರುವ ಪಾಕಿಸ್ತಾನಕ್ಕೆ ಸದ್ಯ ಯಾವ ರಾಷ್ಟ್ರದ ಬೆಂಬಲವೂ ದೊರೆಯುತ್ತಿಲ್ಲ ಎಂದು ಸ್ವತಃ ಪಾಕ್ ವಿದೇಶಾಂಗ ಸಚಿವ ಎಸ್.ಎಂ.ಖುರೇಷಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ವಾರದ ಹಿಂದೆ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಬೆಳವಣಿಗೆ ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಶಾಕ್ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿತ್ತು.
ಕಾಶ್ಮೀರ ವಿಚಾರದ ಬಗ್ಗೆ ಮಾತನಾಡಿದ ಪಾಕ್ ವಿದೇಶಾಂಗ ಸಚಿವ ಖುರೇಷಿ, ಪಾಕ್ ಜೊತೆಗೆ ಯಾವ ರಾಷ್ಟ್ರವೂ ನಿಂತಿಕೊಳ್ಳುತ್ತಿಲ್ಲ ಎನ್ನುವುದು ಸತ್ಯ. ಬೆಂಬಲ ಪಡೆಯುವುದು ಸದ್ಯಕ್ಕೆ ಕಷ್ಟವಾಗುತ್ತಿದೆ. ಮುಸ್ಲಿಂ ದೇಶಗಳು ಸಹ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿಲ್ಲ ಎಂದಿದ್ದಾರೆ.
ಮುಸ್ಲಿಂ ದೇಶಗಳು ಭಾರತದಲ್ಲಿ ಹೂಡಿಕೆ ಮಾಡಿದೆ. ಈ ಕಾರಣದಿಂದ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಆ ರಾಷ್ಟ್ರಗಳು ಪಾಕ್ ಜೊತೆಗೆ ಸೇರುತ್ತಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಎಸ್.ಎಂ.ಖುರೇಷಿ ಅಳಲು ತೋಡಿಕೊಂಡಿದ್ದಾರೆ.